ADVERTISEMENT

ವೈರಲ್‌ ವಿಡಿಯೊ: ಜಿಮ್‌ನಲ್ಲಿ ವರ್ಕೌಟ್ ಮಾಡಿದ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಆಗಸ್ಟ್ 2021, 8:35 IST
Last Updated 21 ಆಗಸ್ಟ್ 2021, 8:35 IST
ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವ ಎಂ.ಕೆ.ಸ್ಟಾಲಿನ್‌
ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವ ಎಂ.ಕೆ.ಸ್ಟಾಲಿನ್‌   

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೊ ಮೂಲಕ ಫಿಟ್ನೆಸ್‌ ಅನ್ನು ಉತ್ತೇಜಿಸುವ ಉದ್ದೇಶವನ್ನು ಸ್ಟಾಲಿನ್‌ ಹೊಂದಿದ್ದಾರೆ ಎನ್ನಲಾಗುತ್ತಿದೆ.

37 ಸೆಕೆಂಡುಗಳ ವಿಡಿಯೊದಲ್ಲಿ ಸ್ಟಾಲಿನ್‌ ಅವರು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವುದನ್ನು ನಾವು ಕಾಣಬಹುದು.

ADVERTISEMENT

ಕೆಲವು ವಾರಗಳ ಹಿಂದೆ ಸ್ಟಾಲಿನ್ ಅವರು ಚೆನ್ನೈನ ಮಾಮಲ್ಲಪುರಂ ರಸ್ತೆಯಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವಿಡಿಯೊಗಳು ವೈರಲ್‌ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.