ರಾಮೇಶ್ವರಂ(ತಮಿಳುನಾಡು): ಕೊರೊನಾ ಸೋಂಕಿನಿಂದ ತತ್ತರಿಸಿರುವ ತಮಿಳುನಾಡಿನಲ್ಲಿ ಇಂದಿನಿಂದ ಆಟೋ ಹಾಗೂ ಸೈಕಲ್ ರಿಕ್ಷಾಗಳ ಸಂಚಾರಕ್ಕೆ ಅವಕಾಶ ನೀಡಿದೆ.
ಸೋಂಕು ನಿಯಂತ್ರಣಕ್ಕೆ ಲಾಕ್‌ಡೌನ್ ಜಾರಿ ಮಾಡಿರುವ ತಮಿಳುನಾಡಿನಲ್ಲಿ ಕಂಟೈನ್ಮೆಂಟ್ ಜೋನ್‌ಗಳಲ್ಲಿ ಹೊರತುಪಡಿಸಿ ಉಳಿದೆಡೆ ಶನಿವಾರದಿಂದ ಆಟೋ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಆದರೆ, ಲಾಕ್‌ಡೌನ್‌ನಿಂದಾಗಿ ಸ್ಥಳೀಯ ಪ್ರಯಾಣಿಕರು ಮನೆಯಿಂದ ಹೊರಗೆ ಬರುತ್ತಿಲ್ಲ. ಪ್ರವಾಸಿಗರು ಬರುತ್ತಿಲ್ಲ. ಹೀಗಾಗಿ ಯಾವುದೇ ಸಂಪಾದನೆ ಇಲ್ಲದಂತಾಗಿದೆ ಎಂದು ಆಟೋ ಚಾಲಕ ರಮೇಶ್ ಅಳಲುತೋಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.