ADVERTISEMENT

ಶ್ರೀಲಂಕಾ ನೆರವಿಗೆ ಡಿಎಂಕೆ ಸಂಸದರಿಂದ ಒಂದು ತಿಂಗಳ ವೇತನ

ಐಎಎನ್ಎಸ್
Published 5 ಮೇ 2022, 10:33 IST
Last Updated 5 ಮೇ 2022, 10:33 IST
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌   

ಚೆನ್ನೈ:ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರಿಲಂಕಾದ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನವನ್ನು ನೀಡಲು ಡಿಎಂಕೆ ಪಕ್ಷದ ರಾಜ್ಯಸಭೆ ಹಾಗೂ ಲೋಕಸಭೆ ಸದಸ್ಯರು ನಿರ್ಧರಿಸಿದ್ದಾರೆ.

ಈ ಬಗ್ಗೆ ಡಿಎಂಕೆ ಹೇಳಿಕೆ ಬಿಡುಗಡೆ ಮಾಡಿದ್ದು, 'ಡಿಎಂಕೆಯ ರಾಜ್ಯಸಭೆ ಮತ್ತು ಲೋಕಸಭೆ ಸದಸ್ಯರು ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಿದ್ದಾರೆ' ಎಂದು ತಿಳಿಸಿದೆ.

ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರಿಲಂಕಾದ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು, ಮುಖ್ಯಮಂತ್ರಿ ಪರಿಹಾರ ನಿಧಿಗೆ ಉದಾರ ಕೊಡುಗೆ ನೀಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಮಂಗಳವಾರ ರಾಜ್ಯದ ಜನರಲ್ಲಿ ಮನವಿ ಮಾಡಿದ್ದರು.

ADVERTISEMENT

ಶ್ರೀಲಂಕಾ ಪರಿಹಾರ ನಿಧಿಗೆ ₹ 1 ಕೋಟಿ ನೀಡುವುದಾಗಿ ಡಿಎಂಕೆ ಈಗಾಗಲೇ ಘೋಷಿಸಿದೆ.

ರಾಜ್ಯ ಸರ್ಕಾರವು ಶ್ರೀಲಂಕಾ ನಾಗರಿಕರಿಗಾಗಿ ಅಗತ್ಯ ವಸ್ತುಗಳು ಮತ್ತು ನಿಧಿ ಸಂಗ್ರಹಿಸುವುದಕ್ಕೆಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಅವರು ಅನುಮತಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.