ಸಾವು (ಪ್ರಾತಿನಿಧಿಕ ಚಿತ್ರ)
ಚೆನ್ನೈ: ತಮಿಳುನಾಡಿನ ಪೊನ್ನೇರಿ ಸಮೀಪದ ಎಣ್ಣೋರ್ ಉಷ್ಣ ವಿದ್ಯುತ್ ಸ್ಥಾವರದಲ್ಲಿ ನಿರ್ಮಾಣ ಕಾಮಗಾರಿ ಸಂದರ್ಭ ಕಬ್ಬಿಣದ ಸಾರುವೆ ಕುಸಿದು ಅಸ್ಸಾಂನ 9 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.
ಸ್ಥಾವರದಲ್ಲಿ ಬಿಎಚ್ಇಎಲ್ ಕೈಗೊಂಡಿರುವ ನಿರ್ಮಾಣ ಕಾಮಗಾರಿ ಸಂದರ್ಭ ಮಂಗಳವಾರ ಸಂಜೆ ದುರಂತ ಸಂಭವಿಸಿದೆ.
‘ಸಾರುವೆ ಕುಸಿದಾಗ ಕಾರ್ಮಿಕರು ಸುಮಾರು 45 ಮೀ. ಎತ್ತರದಿಂದ ಕೆಳಕ್ಕೆ ಬಿದ್ದಿದ್ದಾರೆ’ ಎಂದು ತಮಿಳುನಾಡು ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ. ರಾಧಾಕೃಷ್ಣನ್ ತಿಳಿಸಿದ್ದಾರೆ. ಗಾಯಗೊಂಡ ಒಬ್ಬ ಕಾರ್ಮಿಕನನ್ನು ಚೆನ್ನೈನ ಸ್ಟ್ಯಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರಿಹಾರ ಘೋಷಣೆ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ್ದು, ಮೃತದೇಹಗಳನ್ನು ತವರು ರಾಜ್ಯಕ್ಕೆ ಕಳುಹಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.