ADVERTISEMENT

ತಮಿಳುನಾಡು | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 9 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಅಕ್ಟೋಬರ್ 2023, 10:33 IST
Last Updated 17 ಅಕ್ಟೋಬರ್ 2023, 10:33 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಚೆನ್ನೈ: ತಮಿಳುನಾಡಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ADVERTISEMENT

ತಮಿಳುನಾಡಿನ ವಿರುಧನಗರ ಜಿಲ್ಲೆಯ ಶಿವಕಾಶಿ ಬಳಿಯ ಕಮ್ಮಪಟ್ಟಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದೆ.

ಅಗ್ನಿ ಶಾಮಕ ದಳ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.