
ಸಿಎಂ ಸ್ಟಾಲಿನ್
ಪಿಟಿಐ ಫೋಟೋ
ಚೆನ್ನೈ (ಪಿಟಿಐ): ತಮಿಳುನಾಡು ಹಣಕಾಸು ಸಚಿವ ತಂಗಂ ತೇನರಸು ಅವರು 2026–27ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಿದರು.
ಬಜೆಟ್‌ನಲ್ಲಿ ಸಾಮಾಜಿಕ ಭದ್ರತೆ ಯೋಜನೆಗಳಿಗಾಗಿ ಅವರು ಒಟ್ಟು ₹5,463 ಕೋಟಿ ಮೀಸಲಿಟ್ಟಿದ್ದಾರೆ.
ಬಜೆಟ್ ಭಾಷಣದ ವೇಳೆ ಅವರು, ‘ತಮಿಳುನಾಡಿನಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಸಲು ಕೇಂದ್ರ ಸರ್ಕಾರವು ಯತ್ನಿಸುತ್ತಿದೆ’ ಎಂದು ಆರೋಪಿಸಿದರು.
ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅನ್ಯಾಯ ಎಸಗಿದ ಹಲವು ಉದಾಹರಣೆಗಳು ನಮ್ಮ ಮುಂದಿವೆ ಎಂದರು.
‘ನಮ್ಮ ಸರ್ಕಾರವು ಹಿಂದೆಂದೂ ಕಂಡಿರದಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆಯನ್ನು ನಿರಾಕರಿಸಲಾಗುತ್ತಿದೆ. ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳ ಅನುದಾನವನ್ನು ತಡೆಹಿಡಿಯಲಾಗುತ್ತಿದೆ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.