ಚೆನ್ನೈ: ಸರ್ಕಾರಿ ಆದೇಶಗಳನ್ನು ಮತ್ತು ಇಲಾಖೆಗಳು ಹಾಗೂ ಅಧಿಕಾರಿಗಳ ನಡುವಿನ ಪತ್ರ ವ್ಯವಹಾರಗಳನ್ನು ತಮಿಳು ಭಾಷೆಯಲ್ಲಿಯೇ ನಡೆಸುವಂತೆ ತಮಿಳುನಾಡು ಸರ್ಕಾರ ಸುತ್ತೋಲೆ ಹೊರಡಿಸಿದೆ.
ತಮಿಳುನಾಡು ಅಧಿಕೃತ ಭಾಷಾ ಕಾಯ್ದೆ 1956 ಅನ್ನು ಕಡ್ಡಾಯವಾಗಿ ಪಾಲಿಸುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿ, ಮುಖ್ಯಸ್ಥರು ಮತ್ತು ಜಿಲ್ಲಾಧಿಕಾರಿಗಳಿಗೆ ತಮಿಳುನಾಡು ಅಭಿವೃದ್ಧಿ ಮತ್ತು ಮಾಹಿತಿ ಸಚಿವ ವಿ.ರಾಜಾರಮಣ ಅವರು ಪತ್ರ ಬರೆದಿದ್ದಾರೆ.
ತಮಿಳುನಾಡಿನ ಅಧಿಕಾರಿಗಳು ತಮ್ಮ ಪತ್ರಗಳಿಗೆ ತಮಿಳು ಭಾಷೆಯಲ್ಲಿ ಸಹಿ ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ಟೀಕಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿ ತ್ರಿಭಾಷಾ ಸೂತ್ರ ಅಳವಡಿಕೆ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡಿನ ಸ್ಟಾಲಿನ್ ಸರ್ಕಾರದ ನಡುವಿನ ತಿಕ್ಕಾಟ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.