ADVERTISEMENT

ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್‌ಗೆ ಕೊರೊನಾ ಸೋಂಕು

ಏಜೆನ್ಸೀಸ್
Published 2 ಆಗಸ್ಟ್ 2020, 13:54 IST
Last Updated 2 ಆಗಸ್ಟ್ 2020, 13:54 IST
ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್
ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್   

ಚೆನ್ನೈ: ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್(80) ಅವರಿಗೆ ಕೊರೊನಾ ಸೋಂಕು ಇರುವುದು ಭಾನುವಾರ ದೃಢಪಟ್ಟಿದೆ.

ಪುರೋಹಿತ್‌ ಅವರಿಗೆ ಹೋಮ್‌ ಕ್ವಾರಂಟೈನ್‌ ಆಗಲು ಸೂಚಿಸಲಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಯ ವೈದ್ಯರ ತಂಡದಿಂದ ಚಿಕಿತ್ಸೆ ನಡೆಯುತ್ತಿದೆ.

ರಾಜಭವನದ 84 ನೌಕರರಿಗೆ ಕೋವಿಡ್‌ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಪರೀಕ್ಷೆ ಒಳಪಡಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ADVERTISEMENT

'ರಾಜ್ಯಪಾಲರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿರಲಿಲ್ಲ. ಪರೀಕ್ಷೆಯ ಬಳಿಕ ಅವರಿಗೆ ಸೋಂಕು ಇರುವುದು ದೃಢವಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಮತ್ತು ಸ್ಥಿರವಾಗಿದ್ದಾರೆ' ಎಂದು ಕಾವೇರಿ ಆಸ್ಪತ್ರೆ ವೈದ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.