ADVERTISEMENT

ಮೆಟ್ಟೂರು ಡ್ಯಾಂಗೆ ಹುಸಿ ಬಾಂಬ್‌ ಬೆದರಿಕೆ: ಆರೋಪಿ ಸೆರೆ

ಪಿಟಿಐ
Published 20 ಆಗಸ್ಟ್ 2022, 13:46 IST
Last Updated 20 ಆಗಸ್ಟ್ 2022, 13:46 IST
ಮೆಟ್ಟೂರು ಅಣೆಕಟ್ಟೆ
ಮೆಟ್ಟೂರು ಅಣೆಕಟ್ಟೆ   

ಕೊಯಮತ್ತೂರು: ಮೆಟ್ಟೂರು ಅಣೆಕಟ್ಟೆಯಲ್ಲಿ ಬಾಂಬ್‌ ಇಡಲಾಗಿದೆ ಎಂದು ಹುಸಿ ಕರೆ ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನನ್ನು ಶನಿವಾರ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಮಹಾಲಿಂಗಂ (57) ಬಂಧಿತ ಆರೋಪಿ.

ವಿಚಾರಣೆ ವೇಳೆ ಪಾನಮತ್ತನಾಗಿ ಹುಸಿ ಕರೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆಟ್ಟೂರು ಡ್ಯಾಂನಲ್ಲಿ ಬಾಂಬ್‌ ಇಡಲಾಗಿದೆ ಎಂದು ಶುಕ್ರವಾರ ರಾತ್ರಿ ಪೊಲೀಸ್‌ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಕೂಡಲೇ ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ರಾತ್ರಿ ಇಡೀ ಶೋಧ ಕಾರ್ಯಾಚರಣೆ ನಡೆಸಿತ್ತು. ಬಳಿಕ ಇದೊಂದು ಹುಸಿ ಕರೆ ಎಂಬುದು ಖಚಿತವಾಯಿತು ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.