ADVERTISEMENT

ಕರೂರು ಕಾಲ್ತುಳಿತ ದುರಂತ: TVK ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2025, 12:50 IST
Last Updated 30 ಸೆಪ್ಟೆಂಬರ್ 2025, 12:50 IST
<div class="paragraphs"><p>ಬಂಧಿತ ಆರೋಪಿಗಳು</p></div>

ಬಂಧಿತ ಆರೋಪಿಗಳು

   

–ಪಿಟಿಐ ಚಿತ್ರ

ಚೆನ್ನೈ: ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಇಬ್ಬರು ಕಾರ್ಯದರ್ಶಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ADVERTISEMENT

ಟಿವಿಕೆ ಪಕ್ಷದ ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ.ಮತಿಯಾಳಗನ್ ಮತ್ತು ಕರೂರು ಕೇಂದ್ರ ಜಿಲ್ಲಾ ಕಾರ್ಯದರ್ಶಿ ಕಾಸಿ ಪೌನ್‌ರಾಜ್ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸ್ಸಿ ಆನಂದ್ ಮತ್ತು ಉಪ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಕುಮಾರ್ ಅವರ ವಿರುದ್ಧವು ಎಫ್‌ಐಆರ್‌ ದಾಖಲಿಸಲಾಗಿದೆ. ಆದರೆ, ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 105, 110, 125 ಮತ್ತು 223ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.