ಅನಿತಾ ಆರ್. ರಾಧಾಕೃಷ್ಣನ್
X ಚಿತ್ರ: @ARROffice
ಚೆನ್ನೈ: ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಅರೋಪದಲ್ಲಿ ತಮಿಳುನಾಡಿನ ಮೀನುಗಾರಿಕಾ ಸಚಿವ ಅನಿತಾ ಆರ್. ರಾಧಾಕೃಷ್ಣನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮೇಗ್ನಾನಪುರಂ ಪೊಲೀಸ್ ಠಾಣೆಯಲ್ಲಿ ರಾಧಕೃಷ್ಣನ್ ವಿರುದ್ ಐಪಿಸಿಯ ಸೆಕ್ಷನ್ 294ಬಿ ಅಡಿ ದೂರು ದಾಖಲಾಗಿದೆ. ಬಿಜೆಪಿಯ ತೂತುಕುಡಿ ದಕ್ಷಿಣ ಜಿಲ್ಲಾ ಅಧ್ಯಕ್ಷ ಆರ್. ಸಿದ್ದರಂಗನಾಥನ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 22ರಂದು ತೂತುಕುಡಿ ಜಿಲ್ಲೆಯ ತಂಡಪತು ಎಂಬಲ್ಲಿ ನಡೆದ ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ, ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು.
‘ತಕ್ಷಣವೇ ನಾನು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಲಕ್ಷ್ಮಿಪತಿ ಅವರ ಬಳಿ ದೂರು ದಾಖಲಿಸಿ, ಅಗತ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದೆ. ಭಾನುವಾರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ’ ಎಂದು ರಂಗನಾಥನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.