
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಉಚ್ಚಾಟಿತ ಎಐಎಡಿಎಂಕೆ ನಾಯಕ ಒ. ಪನ್ನೀರ್‌ಸೆಲ್ವಂ ಅವರು ಶುಕ್ರವಾರ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಡಿಎಂಕೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಉಪಸ್ಥಿತಿಯಲ್ಲಿ ಪನ್ನೀರ್‌ಸೆಲ್ವಂ ಅವರು ಆಡಳಿತರೂಢ ಡಿಎಂಕೆ ಪಕ್ಷದ ಸದಸ್ಯತ್ವವನ್ನು ಸ್ವೀಕರಿಸಿದ್ದಾರೆ.
ಪನ್ನೀರ್‌ಸೆಲ್ವಂ ಅವರೊಂದಿಗೆ ಎಐಎಡಿಎಂಕೆ ಪಕ್ಷದ ಹಲವರು ಡಿಎಂಕೆಗೆ ಸೇರ್ಪಡೆಯಾಗಿದ್ದಾರೆ.
2022ರ ಜುಲೈ 11ರಂದು ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ನೇಮಿಸಲಾಗಿತ್ತು. ಪ್ರತಿಸ್ಪರ್ಧಿಯಾಗಿದ್ದ ಒ.ಪನ್ನೀರಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟಿಸಲಾಗಿತ್ತು.
2026ರ ಚುನಾವಣೆಯಲ್ಲಿ ಡಿಎಂಕೆಗೆ ಗೆಲುವಿನ ಸಾಧ್ಯತೆ ಹೆಚ್ಚಿದ್ದು, ಎಂ.ಕೆ.ಸ್ಟಾಲಿನ್ ಮತ್ತೆ ಮುಖ್ಯಮಂತ್ರಿ ಆಗಬಹುದು ಎಂದು ಪನ್ನೀರ್‌ಸೆಲ್ವಂ ಈಚೆಗೆ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.