ADVERTISEMENT

ತಮಿಳುನಾಡಿನಲ್ಲಿ ಭಾರಿ ಮಳೆ: ಚೆನ್ನೈ ಸೇರಿ ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ನವೆಂಬರ್ 2021, 12:30 IST
Last Updated 26 ನವೆಂಬರ್ 2021, 12:30 IST
ಜಲಾವೃತಗೊಂಡಿರುವ ಚೆನ್ನೈ ನಗರದ ರಸ್ತೆಗಳು
ಜಲಾವೃತಗೊಂಡಿರುವ ಚೆನ್ನೈ ನಗರದ ರಸ್ತೆಗಳು   

ಚೆನ್ನೈ: ತಮಿಳುನಾಡಿನಕರಾವಳಿ ಭಾಗದಲ್ಲಿನವೆಂಬರ್‌ 26 ರಿಂದ 29ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಲವು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ಈಗಾಗಲೇ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿಮಳೆ ಸುರಿಯುತ್ತಿದ್ದು, ಚೆನ್ನೈ ಸೇರಿದಂತೆ ಹಲವು ನಗರಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಚೆನ್ನೈ, ರಾಮನಾಥಪುರಂ,ನಾಗಪಟ್ಟಣಂ,ತೂತುಕುಡಿ ಹಾಗೂದಿಂಡಿಗಲ್‌ ಸೇರಿದಂತೆ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಸತತ ಮಳೆಯಾಗುತ್ತಿರುವುದರಿಂದಶಾಲೆ–ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ.

ADVERTISEMENT

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮವಾಗಿ ಮುಂದಿನ ಕೆಲವು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.