ADVERTISEMENT

ಸ್ನೇಹಿತನೊಂದಿಗೆ ಬರ್ತ್‌ಡೇ ಪಾರ್ಟಿ: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 9:35 IST
Last Updated 1 ಡಿಸೆಂಬರ್ 2019, 9:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಯಮತ್ತೂರು: ತನ್ನದೇ ಹುಟ್ಟುಹಬ್ಬ ಆಚರಣೆಗೆಂದುಸ್ನೇಹಿತನೊಂದಿಗೆ ಉದ್ಯಾನವನಕ್ಕೆ ತೆರಳಿದಯುವತಿ ಮೇಲೆ ಆರು ಜನ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

11ನೇ ತರಗತಿಯ ವಿದ್ಯಾರ್ಥಿನಿ ಮಂಗಳವಾರ ತನ್ನ ಸ್ನೇಹಿತನೊಂದಿಗೆ ಉದ್ಯಾನವನಕ್ಕೆ ಹೋಗಿದ್ದಳು.ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗುವ ವೇಳೆ ಯುವತಿಯ ಸ್ನೇಹಿತನನ್ನು ಥಳಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಘಟನೆಯ ವಿಡಿಯೊ ಚಿತ್ರೀಕರಣ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ವಿದ್ಯಾರ್ಥಿನಿಯು ನಡೆದ ವಿಚಾರವನ್ನು ಮರುದಿನ ತನ್ನ ತಾಯಿಯ ಬಳಿ ತಿಳಿಸಿದ್ದಾಳೆ. ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.