ಚೆನ್ನೈ: ತಮಿಳುನಾಡಿನ ಮಹಿಳೆಯೊಬ್ಬರು ಸುಮಾರು 300 ಲೀಟರ್ ಎದೆಹಾಲನ್ನು ದಾನ ಮಾಡುವ ಮೂಲಕ 'ಏಷ್ಯಾ ಬುಕ್ ಆಫ್ ರೆಕಾರ್ಡ್' ಮತ್ತು 'ಇಂಡಿಯಾ ಬುಕ್ ಆಫ್ ರೆಕಾರ್ಡ್' ಎರಡರಲ್ಲೂ ಸ್ಥಾನ ಪಡೆದಿದ್ದಾರೆ.
ಎರಡು ಮಕ್ಕಳ ತಾಯಿಯಾದ ಸೆಲ್ವಾ ಬೃಂದಾ, 2003ರ ಏಪ್ರಿಲ್‌ನಿಂದ 2025ರ ಫೆಬ್ರುವರಿಯವರೆಗೆ 22 ತಿಂಗಳುಗಳಲ್ಲಿ ಒಟ್ಟು 300.17 ಲೀಟರ್ ಎದೆಹಾಲನ್ನು ಚಿರುಚಿರಾಪಳ್ಳಿ ಜಿಲ್ಲೆಯ ಮಹಾತ್ಮಾ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಯ (ಎಂಜಿಎಂಜಿಎಚ್) ಎದೆಹಾಲಿನ ಬ್ಯಾಂಕ್‌ಗೆ ದಾನ ಮಾಡಿದ್ದಾರೆ.
ಈ ಮೂಲಕ ಅವರು ಸಾವಿರಾರು ಅಕಾಲಿಕ ಸಾವು ಮತ್ತು ಅಸ್ವಸ್ಥ ಶಿಶುಗಳ ಜೀವ ಉಳಿಸಲು ಸಹಾಯ ಮಾಡಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
2023-24ರ ಅವಧಿಯಲ್ಲಿ ಆಸ್ಪತ್ರೆಯ ಎದೆಹಾಲಿನ ಬ್ಯಾಂಕ್‌ನಲ್ಲಿ ಸಂಗ್ರಹಿಸಿದ್ದ ಒಟ್ಟಾರೆ ಎದೆ ಹಾಲಿನಲ್ಲಿ ಪ್ರಮಾಣದಲ್ಲಿ ಬೃಂದಾ ಅವರ ಕೊಡುಗೆ ಅರ್ಧದಷ್ಟು ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೃಂದಾ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿದ ಆಸ್ಪತ್ರೆಯ ಅಧಿಕಾರಿಗಳು ನಾಳೆ (ಆಗಸ್ಟ್ 7) ನಡೆಯಲಿರುವ 'ವಿಶ್ವ ಸ್ತನ್ಯಪಾನ ಸಪ್ತಾಹ'ದ ಸಮಾರೋಪ ಸಮಾರಂಭದಲ್ಲಿ ಅವರನ್ನು ಸನ್ಮಾನಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.