ಎಡಪ್ಪಾಡಿ ಕೆ. ಪಳನಿಸ್ವಾಮಿ
ನಾಗಪಟ್ಟಣಂ: ರಾಜ್ಯದಲ್ಲಿ ಮಹಿಳೆಯರು ಮತ್ತು ಯುವತಿಯರು ಸುರಕ್ಷಿತವಾಗಿಲ್ಲ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ಭಾನುವಾರ ಗಂಭೀರ ಆರೋಪ ಮಾಡಿದ್ದಾರೆ.
ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು ಡಿಎಂಕೆ ಸರ್ಕಾರದ ವಿರುದ್ಧ ಹರಿಹಾಯ್ದರು. ತಮಿಳುನಾಡಿನಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಮಹಿಳೆಯರು ಸೇರಿದಂತೆ ಬಾಲಕಿಯರು ಹಾಗೂ ಯುವತಿಯರು ಸುರಕ್ಷಿತವಾಗಿಲ್ಲ, ಇದಕ್ಕೆ ಡಿಎಂಕೆ ಆಡಳಿತವೇ ಕಾರಣ ಎಂದು ಆರೋಪ ಮಾಡಿದರು.
ಆಡಳಿತಾರೂಢ ಡಿಎಂಕೆ ಮಹಿಳೆಯರಿಗೆ ಭದ್ರತೆಯನ್ನು ಖಚಿತಪಡಿಲ್ಲ ಎಂದುು ಟೀಕಿಸಿದ ಅವರು ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಇನ್ನೂ ಬಂಧಿಸಿಲ್ಲ ಎಂದು ಆರೋಪಿಸಿದರು.
ಡಿಎಂಕೆ ಆಡಳಿತದಿಂದ ಜನರು ಎಲ್ಲಾ ರಂಗಗಳಲ್ಲಿ ಭ್ರಮನಿರಸನಗೊಂಡಿದ್ದಾರೆ ಮತ್ತು ಬದಲಾವಣೆಗೆ ಸಿದ್ಧರಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಡಿಎಂಕೆ ಸೋಲಿಸಿ ಎಐಎಡಿಎಂಕೆಯನ್ನು ಅಧಿಕಾರಕ್ಕೆ ತನ್ನಿ ಎಂದು ಜನರಲ್ಲಿ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.