
ಪ್ರಜಾವಾಣಿ ವಾರ್ತೆ
ಚೆನ್ನೈ: ತಮಿಳು ಕಿರುತೆರೆ ನಟಿ ಪ್ರಿಯಾಂಕಾ ಅವರು ಇಲ್ಲಿನ ವಲಸರವಕ್ಕಂನಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿವಿ ಕಾರ್ಯಕ್ರಮ ‘ವಂಶಂ’ನಲ್ಲಿ ಜ್ಯೋತಿಕಾ ಹೆಸರಿನಿಂದ ಇವರು ಪ್ರಸಿದ್ಧರಾಗಿದ್ದರು.
ಫ್ಯಾನ್‌ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿಗೆ ಕೌಟುಂಬಿಕ ಕಲಹ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಇವರಿಗೆ ಮಕ್ಕಳಿರಲಿಲ್ಲ. ಇದು ಅವರಲ್ಲಿ ಒತ್ತಡ ಹೆಚ್ಚಲು ಕಾರಣವಾಗಿತ್ತು ಎನ್ನಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.