‘ದಳಪತಿ’ ವಿಜಯ್
ಪಿಟಿಐ
ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ನಟ, ಟಿವಿಕೆ ಪಕ್ಷದ ಮುಖ್ಯಸ್ಥ ‘ದಳಪತಿ’ ವಿಜಯ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಸೇರಿದಂತೆ ವಕ್ಫ್ ಕಾಯ್ದೆ ಸಿಂಧುತ್ವ ಪ್ರಶ್ನಿಸಿ 10ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದು, ಇದೇ 16ರಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದೆ.
ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಅರ್ಜಿ ಸಲ್ಲಿಸಿರುವ ಕೇಂದ್ರ ಸರ್ಕಾರ, ಈ ವಿಚಾರದಲ್ಲಿ ಯಾವುದೇ ಆದೇಶವನ್ನು ಹೊರಡಿಸುವ ಮುನ್ನ ತನ್ನ ವಾದವನ್ನು ಆಲಿಸುವಂತೆ ಕೋರಿದೆ.
ಉಭಯ ಸದನಗಳಲ್ಲಿ ಮಸೂದೆಗೆ ಅಂಗೀಕಾರ ದೊರೆತ ನಂತರ ಏಪ್ರಿಲ್ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಸೂದೆಗೆ ಅಂಕಿತ ಹಾಕಿದ್ದರು.
ರಾಜ್ಯಸಭೆಯಲ್ಲಿ ಮಸೂದೆಯ ಪರವಾಗಿ 128 ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದ್ದರು. ಲೋಕಸಭೆಯಲ್ಲಿ ಮಸೂದೆಯ ಪರವಾಗಿ 288, ವಿರುದ್ಧವಾಗಿ 232 ಮತಗಳು ಬಿದ್ದಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.