ADVERTISEMENT

ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: ಎರಡು ವಾರದಲ್ಲಿ ನಾಲ್ಕನೇ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜುಲೈ 2022, 5:37 IST
Last Updated 27 ಜುಲೈ 2022, 5:37 IST
   

ಬೆಂಗಳೂರು: ತಮಿಳುನಾಡಿನಲ್ಲಿ 12ನೇ ತರಗತಿಯ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವಾರಗಳ ಅವಧಿಯಲ್ಲಿ ವರದಿಯಾಗಿರುವ ನಾಲ್ಕನೇ ಪ್ರಕರಣ ಇದಾಗಿದೆ.

ಮಂಗಳವಾರ ತಮಿಳುನಾಡಿನ ವಿರುಧ್‌ನಗರ್‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಯ್ಯಂಪಟ್ಟಿ ಗ್ರಾಮದಲ್ಲಿರುವ ಮನೆಯಲ್ಲಿ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ADVERTISEMENT

ವಿದ್ಯಾರ್ಥಿನಿ ಆತ್ಮಹತ್ಯೆ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ವಿರುಧ್‌ನಗರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿ ಸಂಸ್ಥೆ ಎಎನ್‌ಐಗೆ ಮಾಹಿತಿ ನೀಡಿದ್ದಾರೆ.

13 ಜುಲೈನಿಂದ ಈವರೆಗೆ 12ನೇ ತರಗತಿಯ ಇತರ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಮಿಳುನಾಡಿನಲ್ಲಿ ಆತಂಕಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.