ನವದೆಹಲಿ: ಕೇಂದ್ರ ಪ್ರಾಯೋಜಕತ್ವದ ಜಲ ಜೀವನ ಮಿಷನ್ ಅಡಿಯಲ್ಲಿ ಒಂದು ಲಕ್ಷ ಗ್ರಾಮಗಳು ಮತ್ತು 50 ಸಾವಿರಕ್ಕಿಂತಲೂ ಹೆಚ್ಚು ಗ್ರಾಮ ಪಂಚಾಯಿತಿಗಳಿಗೆ ನಲ್ಲಿ ನೀರು ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯವು ತಿಳಿಸಿದೆ.
ಕಳೆದ 23 ತಿಂಗಳ ಅವಧಿಯಲ್ಲಿ ಒಟ್ಟು 4.49 ಕೋಟಿ ನಲ್ಲಿ ನೀರು ಸಂಪರ್ಕ ಒದಗಿಸಲಾಗಿದೆ. 50 ಸಾವಿರ ಗ್ರಾಮ ಪಂಚಾಯಿತಿಗಳಪ್ರತಿ ಮನೆಗೂ ನಲ್ಲಿ ನೀರು ಸಂಪರ್ಕ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್ ಮಿಷನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2019ರ ಆಗಸ್ಟ್ 15ರಂದು ಆರಂಭಿಸಿದ್ದರು. ಗ್ರಾಮೀಣ ಪ್ರದೇಶದ ಎಲ್ಲ ಮನೆಗಳಿಗೂ ನಲ್ಲಿ ನೀರು ಸಂಪರ್ಕ ನೀಡುವುದು ಈ ಯೋಜನೆಯ ಉದ್ದೇಶ. ಈ ಯೋಜನೆಗಾಗಿ ಕೇಂದ್ರ ಸರ್ಕಾರವು ₹50 ಸಾವಿರ ಕೋಟಿ ಮೀಸಲು ಇರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.