ADVERTISEMENT

ಪಂಜಾಬ್‌: ಎಎಪಿ ಶಾಸಕ ಕಾಶ್ಮೀರ್ ಸಿಂಗ್ ಸೋಹಲ್ ನಿಧನ

ಪಿಟಿಐ
Published 28 ಜೂನ್ 2025, 3:03 IST
Last Updated 28 ಜೂನ್ 2025, 3:03 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಅಮೃತಸರ್‌: ತನ್‌ತರನ್‌ ವಿಧಾನಸಭಾ ಕ್ಷೇತ್ರದ ಎಎಪಿ ಶಾಸಕ ಡಾ. ಕಾಶ್ಮೀರ್ ಸಿಂಗ್ ಸೋಹಲ್ ಶುಕ್ರವಾರ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 66ನೇ ವಯಸ್ಸಾಗಿತ್ತು. ಕಳೆದ ಮೂರು ವರ್ಷಗಳಿಂದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ADVERTISEMENT

ಮುಖ್ಯಮಂತ್ರಿ ಭಗವಂತ್ ಮಾನ್ ತಮ್ಮ ಪಕ್ಷದ ಶಾಸಕರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ನಮ್ಮ ಪಕ್ಷದ ಶಾಸಕ ಡಾ. ಕಾಶ್ಮೀರ್ ಸಿಂಗ್ ಸೋಹಲ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ನನಗೆ ತುಂಬಾ ದುಃಖವಾಗಿದೆ, ಅವರಿಗೆ ಸಂತಾಪಗಳು ಎಂದು ಮಾನ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.