ADVERTISEMENT

ಮಂಕಿಪಾಕ್ಸ್‌ ತಡೆ: ಸರ್ಕಾರಕ್ಕೆ ಸಲಹೆ ನೀಡಲು ಕಾರ್ಯಪಡೆ ರಚನೆ

ಪಿಟಿಐ
Published 28 ಜುಲೈ 2022, 14:11 IST
Last Updated 28 ಜುಲೈ 2022, 14:11 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ನವದೆಹಲಿ: ಮಂಕಿಪಾಕ್ಸ್‌ ನಿಯಂತ್ರಣ ಸಂಬಂಧ ಸರ್ಕಾರಕ್ಕೆ ಅಗತ್ಯ ಸಲಹೆ ನೀಡುವುದಕ್ಕಾಗಿ ಕಾರ್ಯಪಡೆಯೊಂದನ್ನು ರಚಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

‘ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಇದೇ 26ರಂದು ನಡೆದಿದ್ದ ಸಭೆಯಲ್ಲಿ ಕಾರ್ಯಪಡೆ ರಚನೆ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ. ಮಂಕಿಪಾಕ್ಸ್‌ ಸೋಂಕಿತರ ಪತ್ತೆ ಹಾಗೂ ಅವರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ತ್ವರಿತವಾಗಿ ಕೆಲಸ ಮಾಡಬೇಕೆಂದು ರಾಷ್ಟ್ರೀಯ ಏಡ್ಸ್‌ ನಿಯಂತ್ರಣ ಸಂಸ್ಥೆ ಮತ್ತು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯಕ್ಕೆ (ಡಿಜಿಎಚ್‌ಎಸ್) ಸೂಚಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ದೇಶದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ, ಕಿಟ್‌ಗಳ ಲಭ್ಯತೆ, ರೋಗ ಪತ್ತೆ ಸಾಧನಗಳ ಅಗತ್ಯತೆ ಹಾಗೂ ಲಸಿಕೆ ಸೇರಿದಂತೆ ಇತರ ವಿಚಾರಗಳ ಕುರಿತು ಕಾರ್ಯಪಡೆಯು ಸರ್ಕಾರಕ್ಕೆ ಮಾರ್ಗದರ್ಶನ ನೀಡಲಿದೆ’ ಎಂದೂ ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.