ನವದೆಹಲಿ: ಸಂಸತ್ತಿನ ನೂತನ ಭವನದ ನಿರ್ಮಾಣದ, ₹ 861.90 ಕೋಟಿ ವೆಚ್ಚದ ನಿರ್ಮಾಣ ಗುತ್ತಿಗೆಯನ್ನು ಟಾಟಾ ಸಮೂಹ ಸಂಸ್ಥೆಯು ಪಡೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಅಂಡ್‌ಟಿ ಕಂಪನಿ ₹ 865 ಕೋಟಿಗೆ ಬಿಡ್ ಮಾಡಿತ್ತು. ಸೆಂಟ್ರಲ್ ವಿಸ್ತಾ ಯೋಜನೆಯಡಿ ಈಗಿರುವ ಕಟ್ಟಡದ ಸಮೀಪವೇ ನೂತನ ಸಂಸತ್ ಭವನವನ್ನು ನಿರ್ಮಿಸಲಾಗುತ್ತದೆ. ಈ ಕಟ್ಟಡ ನಿರ್ಮಾಣ ಕಾರ್ಯ ಇಪ್ಪತ್ತೊಂದು ತಿಂಗಳಲ್ಲಿ ಪೂರ್ಣವಾಗುವ ನಿರೀಕ್ಷೆ ಇದೆಎಂದುಕೇಂದ್ರ ಲೋಕೋಪಯೋಗಿ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.