ADVERTISEMENT

ಕೇಂದ್ರದಿಂದ ₹1.03 ಲಕ್ಷ ಕೋಟಿ ತೆರಿಗೆ ಪಾಲು ಬಿಡುಗಡೆ.. ಕರ್ನಾಟಕಕ್ಕೆ ಎಷ್ಟು?

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2025, 13:46 IST
Last Updated 2 ಅಕ್ಟೋಬರ್ 2025, 13:46 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ </p></div>

ಪ್ರಧಾನಿ ನರೇಂದ್ರ ಮೋದಿ

   

(ಸಂಗ್ರಹ ಚಿತ್ರ) 

ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಹೆಚ್ಚುವರಿಯಾಗಿ ₹3,705 ಕೋಟಿ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ ಹೋಲಿಸಿದರೆ ಬಿಜೆಪಿ ಆಡಳಿತವಿರುವ ಉತ್ತರದ ರಾಜ್ಯಗಳಿಗೆ ಬಿಡುಗಡೆಯಾಗಿರುವ ಮೊತ್ತ ಹೆಚ್ಚು ಇದೆ. 

ADVERTISEMENT

ಕೇಂದ್ರವು 28 ರಾಜ್ಯಗಳಿಗೆ ಒಟ್ಟು ₹1,01,603 ಕೋಟಿ ಬಿಡುಗಡೆಗೊಳಿಸಿದೆ. ಅಕ್ಟೋಬರ್ 10ರಂದು ಬಿಡುಗಡೆಯಾಗಲಿರುವ ಸಾಮಾನ್ಯ ಮಾಸಿಕ ಹಂಚಿಕೆಯ ಜೊತೆಗೆ ಹೆಚ್ಚುವರಿಯಾಗಿ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. 

15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ, ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆಯಲ್ಲಿ ಶೇ 41 ಮೊತ್ತವನ್ನು ರಾಜ್ಯ ಸರ್ಕಾರಗಳಿಗೆ 14 ಕಂತುಗಳಲ್ಲಿ ಹಂಚಿಕೆ ಮಾಡಲಾಗುತ್ತದೆ. 

‘ಮುಂಬರುವ ಹಬ್ಬದ ಋತುವಿನ ದೃಷ್ಟಿಯಿಂದ ಮತ್ತು ರಾಜ್ಯ ಸರ್ಕಾರಗಳಿಗೆ ಅಭಿವೃದ್ಧಿ ಹಾಗೂ ಬಂಡವಾಳ ವೆಚ್ಚಕ್ಕೆ ಹೆಚ್ಚಿನ ಹಣ ತೊಡಗಿಸಲು ಅನುಕೂಲ ಮಾಡಲು ಈ ಕಂತು ಬಿಡುಗಡೆಗೊಳಿಸಲಾಗಿದೆ’ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.