
ಪಿಟಿಐ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿನ ಎರಡು ಶಿಕ್ಷಣ ಸಂಸ್ಥೆಗಳ ಮೇಲಿನ ತೆರಿಗೆ ವಂಚನೆ ಮತ್ತು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ ಉಲ್ಲಂಘಿಸಿದ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿದ್ದಾರೆ.
‘ಅಲ್ ಹುದಾ ಮತ್ತು ಸಲ್ಫಿಯಾ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ’ ಎಂದು ಬಾರಾಮುಲ್ಲಾ ಪೊಲೀಸರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
ಇದರಹ್ ಫಲಾಹ್ ಯು–ದಾರೈನ್ ಸೊಸೈಟಿ ವಿರುದ್ಧವೂ ಅಧಿಕಾರಿಗಳು ಕಾನೂನು ಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.