
ನವದೆಹಲಿ: ತೆರಿಗೆ ಪಾವತಿದಾರರಿಗೆ ಹೆಚ್ಚು ತೊಂದರೆಯಾಗದಂತೆ ತೆರಿಗೆ ಸಂಗ್ರಹವು ಸುಗಮ ಪ್ರಕ್ರಿಯೆಯಾಗಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಭಾರತೀಯ ಕಂದಾಯ ಸೇವೆಯ (ಸುಂಕ ಮತ್ತು ಪರೋಕ್ಷ ತೆರಿಗೆ) ತರಬೇತಿನಿರತ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾರದರ್ಶಕ, ಜವಾಬ್ದಾರಿಯುತ ಮತ್ತು ತಂತ್ರಜ್ಞಾನ ಚಾಲಿತವಾದ ವ್ಯವಸ್ಥೆಗಳನ್ನು ರೂಪಿಸುವಂತೆ ಹೇಳಿದರು.
‘ರಾಷ್ಟ್ರ ನಿರ್ಮಾಣಕ್ಕೆ ತೆರಿಗೆ ಸಂಗ್ರಹವು ನಿರ್ಣಾಯಕವಾಗಿದೆ. ಇದು ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಮಾಜ ಕಲ್ಯಾಣಕ್ಕಾಗಿ ಹಣಕಾಸು ಒದಗಿಸುವ ಮೂಲವಾಗಿದೆ. ಆದ್ದರಿಂದ, ನೀವು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಭಾಗವಹಿಸುವವರು’ ಎಂದು ಮುರ್ಮು ಅವರು ಅಧಿಕಾರಿಗಳಿಗೆ ತಿಳಿಸಿದರು.
ಈ ವರ್ಷ ಸೆಪ್ಟೆಂಬರ್‌ನಲ್ಲಿ ಪರಿಚಯಿಸಲಾದ ಸರಕು ಮತ್ತು ಸೇವಾ ತೆರಿಗೆಗಳ ಸುಧಾರಣೆಯು ಭಾರತದ ತೆರಿಗೆ ವ್ಯವಸ್ಥೆಯನ್ನು ಮರುರೂಪಿಸುವಲ್ಲಿ ಪ್ರಮುಖ ಹೆಗ್ಗುರುತಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.