ADVERTISEMENT

ಶಿಕ್ಷಣಕ್ಕೆ ಆದ್ಯತೆ ನೀಡಲು ತೆರಿಗೆದಾರರ ಹಣ ಬಳಕೆ: ಕೇಜ್ರಿವಾಲ್

ಪಿಟಿಐ
Published 6 ಫೆಬ್ರುವರಿ 2024, 9:14 IST
Last Updated 6 ಫೆಬ್ರುವರಿ 2024, 9:14 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ನವದೆಹಲಿ: ಶಿಕ್ಷಣಕ್ಕೆ ಆದ್ಯತೆ ನೀಡಲು ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರವು, ತೆರಿಗೆದಾರರ ಹಣವನ್ನು ಬಳಸಿಕೊಳ್ಳುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.

ADVERTISEMENT

ಪಶ್ಚಿಮ ವಿಹಾರದ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಮ್ಮ (ಎಎಪಿ) ಸರ್ಕಾರ ಅಧಿಕಾರಕ್ಕೆ ಬಂದಾಗ ಶಿಕ್ಷಣಕ್ಕಾಗಿ ಬಜೆಟ್ ಅನ್ನು ದ್ವಿಗುಣಗೊಳಿಸಿದ್ದೇವೆ. ಆದರೆ ದೆಹಲಿಯ ನಿವಾಸಿಗಳ ಬೆಂಬಲವಿಲ್ಲದೆ ಈ ಎಲ್ಲ ಶಾಲೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿರಲಿಲ್ಲ. ತೆರಿಗೆದಾರರ ಹಣ ನಮಗೆ ಉಚಿತ ಶಿಕ್ಷಣ ನೀಡಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

ನೀವು (ಮಕ್ಕಳು) ಬೆಳೆದು ದೊಡ್ಡವರಾಗಿ ಜೀವನದಲ್ಲಿ ಏನನ್ನಾದರೂ ಸಾಧಿಸಿದಾಗ, ನೆನಪಿಡಿ, ನಿಮ್ಮ ಶಿಕ್ಷಣಕ್ಕಾಗಿ ದೇಶವು ಪಾವತಿ ಮಾಡಿದೆ. ಮಕ್ಕಳು ಇಡೀ ದೇಶವೇ ಹೆಮ್ಮೆಪಟ್ಟುಕೊಳ್ಳುವಂತೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಬಡ ಕುಟುಂಬದ ಮಕ್ಕಳ ಶಿಕ್ಷಣಕ್ಕಾಗಿ ದುಡಿದ ಸಂತೃಪ್ತಿ ನನಗಿದೆ ಎಂದು ಅವರು ಉಲ್ಲೇಖಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.