ADVERTISEMENT

ಗುಂಟೂರು ಕಾಲ್ತುಳಿತಕ್ಕೆ ಆಂಧ್ರ ಸರ್ಕಾರ ಹೊಣೆ: ಟಿಡಿಪಿ

ಪಿಟಿಐ
Published 2 ಜನವರಿ 2023, 7:37 IST
Last Updated 2 ಜನವರಿ 2023, 7:37 IST
   

ಗುಂಟೂರು: ಆಂಧ್ರಪ್ರದೇಶದ ಗುಂಟೂರಿನಲ್ಲಿ ಭಾನುವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರ್ಕಾರವೇ ಹೊಣೆ ಎಂದು ತೆಲುಗುದೇಶಂ ಪಕ್ಷವು (ಟಿಡಿಪಿ) ದೂರಿದೆ.

ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಟಿಡಿಪಿ ರಾಜ್ಯಾಧ್ಯಕ್ಷ ಕೆ. ಅಚ್ಚ ನಾಯ್ಡು ದೂರಿದ್ದಾರೆ.

ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ ಒದಗಿಸುವುದು ಪೊಲೀಸರ ಜವಾಬ್ದಾರಿಯಲ್ಲವೇ ಎಂದು ಅವರು ಪ್ರಶ್ನಿಸಿದರು.

ADVERTISEMENT

ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭಾಷಣ ಮುಗಿಸಿ ನಿರ್ಗಮಿಸಿದ ಬೆನ್ನಲ್ಲೇ ನೂಕುನೂಗ್ಗಲು ಉಂಟಾಗಿತ್ತು. ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ದುರಂತದ ಬಗ್ಗೆ ಸಂತಾಪ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ರಾಜ್ಯ ಸರ್ಕಾರವು ತಲಾ ₹2 ಲಕ್ಷ ಪರಿಹಾರ ಘೋಷಿಸಿದೆ. ಇದಲ್ಲದೆ ಟಿಡಿಪಿ ನಾಯಕರಾದ ಕೆ. ರವೀಂದ್ರ ತಲಾ ₹2 ಲಕ್ಷ ಮತ್ತು ಮನ್ನಾವ ಮೋಹನ ಕೃಷ್ಣ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.