ವಿದ್ಯಾರ್ಥಿ ಆತ್ಮಹತ್ಯೆ
Credit: iStock Photo
ಭೋಪಾಲ್: ‘ಬಿಯರ್’ ಕುಡಿಯುವಂತೆ ಶಿಕ್ಷಕರೊಬ್ಬರ ಕಿರುಕುಳ ತಾಳಲಾರದೆ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೂ ಮುನ್ನ ವಿಡಿಯೊ ಮಾಡಿರುವ ವಿಧ್ಯಾರ್ಥಿ, ‘ಈ ಶಿಕ್ಷಕನ ಕಿರುಕುಳದಿಂದ ಇನ್ನಷ್ಟು ಮಕ್ಕಳು ಪ್ರಾಣ ಕಳೆದುಕೊಳ್ಳಲಿದ್ದಾರೆ’ ಎಂದು ಅಳಲು ತೊಡಿಕೊಂಡಿದ್ದಾನೆ.
ಜನವರಿ 22ರಂದು ಭೋಪಾಲ್‌ನಿಂದ 280 ಕಿಲೋಮೀಟರ್ ದೂರದಲ್ಲಿರುವ ಕೋಲಾರಸ್ ರೈಲು ನಿಲ್ದಾಣದ ಬಳಿ ವಿದ್ಯಾರ್ಥಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಚಾಲಕ ತುರ್ತು ಬ್ರೇಕ್ ಹಾಕಿದರೂ ವಿದ್ಯಾರ್ಥಿಯನ್ನು ಪ್ರಾಣಾಪಾಯದಿಂದ ಪಾರುಮಾಡಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ.
ಕನಿಷ್ಠ ಒಂದು ಬಾರಿಯಾದರೂ ಸಹವರ್ತಿ ವಿದ್ಯಾರ್ಥಿಗಳೊಂದಿಗೆ ಸೇರಿ ‘ಬಿಯರ್’ ಕುಡಿಯಬೇಕು. ಇಲ್ಲದಿದ್ದರೆ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ನೀಡುವುದಾಗಿ ವಿದ್ಯಾರ್ಥಿಗೆ ಶಿಕ್ಷಕ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ವಿದ್ಯಾರ್ಥಿಯ ವಿಡಿಯೊ ಆಧರಿಸಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.