ADVERTISEMENT

ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ್ದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ

ಪಿಟಿಐ
Published 4 ಫೆಬ್ರುವರಿ 2026, 15:07 IST
Last Updated 4 ಫೆಬ್ರುವರಿ 2026, 15:07 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಗಾಂಧಿನಗರ: ಹೋಂ ವರ್ಕ್‌ ಮುಗಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಶಿಕ್ಷಕರಿಗೆ ಇಲ್ಲಿನ ನ್ಯಾಯಾಲಯವೊಂದು ಮೂರು ವರ್ಷ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ADVERTISEMENT

ಶಿಕ್ಷಕಿ ಪಾರುಲ್‌ ಪಟೇಲ್‌ ಅವರು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು 14 ವರ್ಷದ 9ನೇ ತರಗತಿ ವಿದ್ಯಾರ್ಥಿನಿಗೆ ಹೊಡೆದಿದ್ದಾರೆ. ಪರಿಣಾಮ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ ಮತ್ತು ಅದು ದೀರ್ಘಕಾಲದ ಶ್ರವಣದೋಷಕ್ಕೆ ಕಾರಣವಾಗಿದೆ ಎಂದು ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್‌ ಹಿಮಾಂಶು ಚೌಧರಿ ಅವರು ಜನವರಿ 30ರಂದು ತಿಳಿಸಿದ್ದಾರೆ. 

ಜೈಲು ಶಿಕ್ಷೆಯೊಂದಿಗೆ ಶಿಕ್ಷಕಿಗೆ ₹50,000 ದಂಡ ವಿಧಿಸಲಾಗಿದ್ದು, ಆ ಹಣವನ್ನು ವಿದ್ಯಾರ್ಥಿನಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯ ನಿರ್ದೇಶಿಸಿದೆ. 

ಗಾಂಧಿನಗರದ ಖಾಸಗಿ ಶಾಲೆಯೊಂದರಲ್ಲಿ 2020ರ ಜನವರಿ 1ರಂದು ಈ ಘಟನೆ ನಡೆದಿತ್ತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.