
ನ್ಯಾಯಾಲಯ
(ಸಾಂದರ್ಭಿಕ ಚಿತ್ರ)
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ 32,000 ಪ್ರಾಥಮಿಕ ಶಾಲಾ ಶಿಕ್ಷಕ ನೇಮಕಾತಿಯನ್ನು ರದ್ದು ಮಾಡಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಕಲ್ಕತ್ತಾ ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ವಜಾಗೊಳಿಸಿದೆ.
2014ರಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಮೂಲಕ ಈ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು.
ನ್ಯಾಯಮೂರ್ತಿ ತಪಬ್ರತಾ ಚಕ್ರವರ್ತಿ ಅವರು, ‘ಎಲ್ಲಾ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವುದಕ್ಕೆ ಪುರಾವೆಗಳಿಲ್ಲ. ಹೀಗಾಗಿ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ವಜಾಗೊಳಿಸಲಾಗುತ್ತಿದೆ’ ಎಂದು ಹೇಳಿದರು.
ಒಂಬತ್ತು ವರ್ಷಗಳ ನಂತರ ಶಿಕ್ಷರನ್ನು ಕೆಲಸದಿಂದ ತೆಗೆದುಹಾಕುವುದು ಪ್ರಾಥಮಿಕ ಶಿಕ್ಷಕರು ಮತ್ತು ಅವರ ಕುಟುಂಬದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.
ಕೆಲವರ ನೇಮಕದಲ್ಲಿ ಅವ್ಯವಹಾರ ನಡೆದಿದೆ ಎಂಬ ಕಾರಣಕ್ಕಾಗಿ ಇಡೀ ಆಯ್ಕೆ ಪ್ರಕ್ರಿಯೆಯನ್ನೇ ರದ್ದು ಮಾಡಲಾಗದು ಎಂದು ತಿಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.