ADVERTISEMENT

ಅಸ್ಸಾಂನಲ್ಲಿ ಕಳೆದ ಐದು ವರ್ಷಗಳಲ್ಲಿ 71 ಸಾವಿರ ಶಿಕ್ಷಕರ ನೇಮಕ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 5:57 IST
Last Updated 6 ಫೆಬ್ರುವರಿ 2021, 5:57 IST
ಹಿಮಂತ ಬಿಸ್ವ ಶರ್ಮಾ
ಹಿಮಂತ ಬಿಸ್ವ ಶರ್ಮಾ   

ಗುವಾಹಟಿ: ಅಸ್ಸಾಂನಲ್ಲಿ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 71 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಶಿಕ್ಷಣ ಇಲಾಖೆಯಲ್ಲಿ ಖಾಲಿ ಇದ್ದ ಬಹುತೇಕ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಹಿಮಂತ ಬಿಶ್ವ ಶರ್ಮಾ ಹೇಳಿದ್ದಾರೆ.

‘ಇಂದು ನಾವು ಸುಮಾರು 30 ಸಾವಿರ ಶಿಕ್ಷಕರ ನೇಮಕ ಮಾಡಿಕೊಂಡಿದ್ದೇವೆ. ಶಿಕ್ಷಣ ಇಲಾಖೆಯಲ್ಲಿ ಖಾಲಿ ಇದ್ದ ಬಹುತೇಕ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ. ನಾವು ಕಳೆದ ಐದು ವರ್ಷಗಳಲ್ಲಿ 71 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ’ ಎಂದು ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

‘ಇಂದು 29,701 ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದೇವೆ ಎಂಬುದು ಹೆಮ್ಮೆಯ ಸಂಗತಿ. ಅಸ್ಸಾಂನಲ್ಲಿ ಇಂತಹ ಮೊದಲ ಆಂದೋಲನವಿದು. ಎಲ್ಲ ಅರ್ಹ ಶಿಕ್ಷಕರು ಮತ್ತು ಸಿಬ್ಬಂದಿಗೆ ಅಭಿನಂದನೆಗಳು. ನಾವು ನಿಮ್ಮ ಕೊಡುಗೆಯನ್ನು ನಿರೀಕ್ಷಿಸುತ್ತೇವೆ’ ಎಂದೂ ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.