ಅಹಮದಾಬಾದ್: ‘ವಿಮಾನ ದುರಂತದ ಸಂತ್ರಸ್ತರು ಹಾಗೂ ಅವರ ಕುಟುಂಬಸ್ಥರಿಗೆ ಅಗತ್ಯವಿರುವ ಎಲ್ಲ ನೆರವು ನೀಡಲಾಗುವುದು’ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು ಗುರುವಾರ ಹೇಳಿದ್ದಾರೆ.
‘ಅಹಮದಾಬಾದ್‌ನ ದುರಂತದ ಸ್ಥಳಕ್ಕೆ ಭೇಟಿ ನೀಡಿದ್ದೆ. ಅಲ್ಲಿನ ಕರುಣಾಜನಕ ಸ್ಥಿತಿಯನ್ನು ಕಣ್ಣಾರೆ ಕಂಡೆ. ರಕ್ಷಣೆ ಹಾಗೂ ಪರಿಹಾರ ಕಾರ್ಯಗಳ ಮೇಲೆ ನಿಗಾ ಇಟ್ಟಿದ್ದೇನೆ’ ಎಂದು ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
‘ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ), ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ), ಏರ್ ಇಂಡಿಯಾ, ಎನ್‌ಡಿಆರ್‌ಎಫ್ ಹಾಗೂ ಸ್ಥಳೀಯ ಆಡಳಿತ ನಿರಂತರವಾಗಿ ಕೆಲಸ ಮಾಡುತ್ತಿವೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.