ADVERTISEMENT

ಶುಲ್ಕ ವಿನಾಯಿತಿ ಯೋಜನೆ ಪರಿಷ್ಕರಿಸಿದ ಎಐಸಿಟಿಇ

ಎಂಬಿಎ, ಎಂಸಿಎ, ಪಿಜಿಡಿಎಂ, ಪಿಜಿಡಿಸಿಎ ಕೋರ್ಸ್‌ಗಳಿಗೆ ಅನ್ವಯ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2018, 20:15 IST
Last Updated 29 ನವೆಂಬರ್ 2018, 20:15 IST

ನವದೆಹಲಿ: ಎಂಬಿಎ, ಎಂಸಿಎ, ಪಿಜಿಡಿಎಂ ಮತ್ತು ಪಿಜಿಡಿಸಿಎ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅರ್ಹತೆ ಗಳಿಸುವ ಪ್ರತಿಭಾವಂತ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹6 ಲಕ್ಷ ಮೀರಿರದಿದ್ದಲ್ಲಿ, ಅಂತಹವರ ಶಿಕ್ಷಣ ಶುಲ್ಕಕ್ಕೆ ವಿನಾಯಿತಿ ನೀಡಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ತೀರ್ಮಾನಿಸಿದೆ.

ಇತ್ತೀಚೆಗೆ ನಡೆದ ಮಂಡಳಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸೌಲಭ್ಯವನ್ನು ಹಿಂದಿನ ಯುಪಿಎ ಸರ್ಕಾರ 2011ರಲ್ಲಿ ಆರಂಭಿಸಿತ್ತು. ಇದೀಗ ಎಐಸಿಟಿಇ ಅಧೀನದ ಎಲ್ಲಾ ತಾಂತ್ರಿಕ ಮತ್ತು ವೃತ್ತಿಪರ ಸಂಸ್ಥೆಗಳಿಗೆ ಇದು ಅನ್ವಯವಾಗಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಬೇಡಿಕೆಯ ಮೇರೆಗೆ ಮಂಡಳಿ ಶಿಕ್ಷಣ ಶುಲ್ಕ ವಿನಾಯಿತಿ ಯೋಜನೆಯನ್ನು ಪರಿಷ್ಕರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.