ADVERTISEMENT

ಟೆಕಿ ಅತುಲ್‌ ಪತ್ನಿ ನಿರೀಕ್ಷಣಾ ಜಾಮೀನಿಗೆ ಅರ್ಜಿ

ಅಲಹಾಬಾದ್‌ ಹೈಕೋರ್ಟ್‌ ಮೊರೆ ಹೋದ ಆರೋಪಿಗಳು

ಪಿಟಿಐ
Published 14 ಡಿಸೆಂಬರ್ 2024, 16:03 IST
Last Updated 14 ಡಿಸೆಂಬರ್ 2024, 16:03 IST
ಅತುಲ್ ಸುಭಾಷ್
ಅತುಲ್ ಸುಭಾಷ್   

ಪ್ರಯಾಗರಾಜ್‌: ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಟೆಕಿ ಅತುಲ್‌ ಸುಭಾಷ್‌ ಅವರ ಪತ್ನಿ ಹಾಗೂ ಆಕೆಯ ಕುಟುಂಬದವರು ನಿರೀಕ್ಷಣಾ ಜಾಮೀನು ಕೋರಿ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ, ಸುಭಾಷ್‌ ಪತ್ನಿ ನಿಕಿತಾ ಸಿಂಘಾನಿಯಾ ಅವರಿಗೆ ಬೆಂಗಳೂರು ನಗರ ಪೊಲೀಸರು ಶುಕ್ರವಾರ ಸಮನ್ಸ್‌ ಜಾರಿ ಮಾಡಿದ್ದರು. ಹೀಗಾಗಿ, ನಿಕಿತಾ ಹಾಗೂ ಪ್ರಕರಣದ ಇತರ ಆರೋಪಿಗಳಾದ ನಿಕಿತಾ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್‌ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್‌ ಸಿಂಘಾನಿಯಾ ಅವರು ನಿರೀಕ್ಷಣಾ ಜಾಮೀನಿನ ಮೊರೆಹೋಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶಕ್ಕೆ ತೆರಳಿರುವ ಮಾರತ್‌ಹಳ್ಳಿ ಠಾಣೆ ಪೊಲೀಸರ ತಂಡ‌ವು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದೆ. ಆರೋಪಿಗಳು ತಮ್ಮ ನಿವಾಸವನ್ನು ತೊರೆದಿದ್ದು, ಅನ್ಯ ರಾಜ್ಯಗಳಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.