ನವದೆಹಲಿಯಲ್ಲಿ ಅನೇಕ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದ ನಂತರ ಮಯೂರ್ ವಿಹಾರ್‌ನ ಮದರ್ ಮೇರಿ ಶಾಲೆ ಬಳಿ ಬುಧವಾರ ಪೊಲೀಸರನ್ನು ನಿಯೋಜಿಸಲಾಗಿತ್ತು
ಪಿಟಿಐ ಚಿತ್ರ
ದೆಹಲಿ: ದೆಹಲಿ ಪೊಲೀಸರಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಬಾಲಕನೊಬ್ಬನನ್ನು ದೆಹಲಿ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಜೈಸಿಂಗ್ ರಸ್ತೆಯಲ್ಲಿಯಿರುವ ದೆಹಲಿ ಪೊಲೀಸ್ ಹೆಡ್ ಕ್ವಾರ್ಟರ್‌ಗೆ ಆರೋಪಿ ಬಾಲಕ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ.
ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
‘ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದು ಏಕೆ ಹಾಗೂ ಬಾಲಕನ ಮನಸ್ಥಿತಿ ಏನು ಎಂಬುದರ ಕುರಿತು ವಿಚಾರಣೆ ನಡೆಸಲಾಗುವುದು. ಆತನ ವಿರುದ್ಧ ಜೆಜೆ ಆ್ಯಕ್ಟ್ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೌನ್ಸಲಿಂಗ್ ನಡೆಸಿ ಆತನನ್ನು ಪೋಷಕರ ಬಳಿ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದಲ್ಲದೇ ಮೇ 1 ರಂದು ದೆಹಲಿ–ಎನ್‌ಸಿಆರ್‌ನ 100ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಮಕ್ಕಳು ಮತ್ತು ಪೋಷಕರಲ್ಲಿ ಆತಂಕ ಸೃಷ್ಟಿಯಾಗಿತ್ತು.
ದೆಹಲಿ–ಎನ್‌ಸಿಆರ್‌ನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದವರ ಮೂಲವನ್ನು ದೆಹಲಿ ಪೊಲೀಸರು ಪತ್ತೆ ಮಾಡಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.