ಸಾಂಕೇತಿಕ ಚಿತ್ರ
ಐಸ್ಟಾಕ್ ಚಿತ್ರ
ಬಲ್ಲಿಯಾ: ಇಯರ್‌ಫೋನ್ ಧರಿಸಿ ಹಳಿ ದಾಟುತ್ತಿದ್ದ 16 ವರ್ಷದ ಬಾಲಕನ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಲ್ಲಿಯಾ ಮೌ ರೈಲ್ವೆ ನಿಲ್ದಾಣ ಸಮೀಪದ ಉದೈನಾ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಮೃತ ಬಾಲಕನನ್ನು ಅರವಿಂದ ರಾಜಭರ್ ಎಂದು ಗುರುತಿಸಲಾಗಿದೆ. ಇವರು ಕಿವಿಗೆ ಇಯರ್‌ಫೋನ್ ಧರಿಸಿ ಸಂಗೀತ ಆಲಿಸುತ್ತಾ ಹಳಿ ದಾಟುತ್ತಿದ್ದರು. ಆದರೆ ವೇಗವಾಗಿ ಸಾಗುತ್ತಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್ ಬರುತ್ತಿರುವುದನ್ನು ಇವರು ಗಮನಿಸದ ಕಾರಣ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯ ಮಾಹಿತಿ ಪಡೆದ ರೈಲ್ವೆ ಸುರಕ್ಷಾ ದಳದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.