ಪ್ರಾತಿನಿಧಿಕ ಚಿತ್ರ
ರಾಯಪುರ: 13 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಛತ್ತೀಸಗಢದ ರಾಜಧಾನಿ ರಾಯಪುರದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದರು.
ಬಾಲಕಿ ಆಟವಾಡಲೆಂದು ಪಕ್ಕದ ಬಾಲಕನ ಮನೆಗೆ ಹೋಗಿದ್ದಳು. ಈ ಸಂದರ್ಭದಲ್ಲಿ ಚಾಕೊಲೇಟ್ ಕೊಡುವುದಾಗಿ ಆಸೆ ತೋರಿಸಿ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಅಳಲು ಆರಂಭಿಸಿದಾಗ ಆಕೆಯನ್ನು ಮನೆಯಿಂದ ಹೊರಗೆ ಬಿಟ್ಟು ಹೋಗಿದ್ದ. ಬಳಿಕ ಆಕೆಯ ತಾಯಿ ಅಳಲು ಕಾರಣವೇನು ಎಂದು ಕೇಳಿದಾಗ ಘಟನೆ ಬಗ್ಗೆ ವಿವರಿಸಿದ್ದಳು ಎಂದು ತಿಳಿಸಿದರು.
ಪ್ರಕರಣದ ಸಂಬಂಧ ಬಾಲಕನ್ನು ವಶಕ್ಕೆ ಪಡೆಯಲಾಗಿದೆ. ಬಾಲಕಿಯ ಪೋಷಕರು ಬಾಲಕನ ವಿರುದ್ಧ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಬಾಲಕನ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.