ADVERTISEMENT

ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ: ಬಾಲಕನಿಗೆ ಗುಂಡು

ಪಿಟಿಐ
Published 29 ಜುಲೈ 2025, 8:38 IST
Last Updated 29 ಜುಲೈ 2025, 8:38 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ತಿರುನಲ್ವೇಲಿ: ಗುಂಪು ಘರ್ಷಣೆಯಲ್ಲಿ ಭಾಗಿಯಾಗಿದ್ದ ಬಾಲಕನನ್ನು ವಶಕ್ಕೆ ಪಡೆಯಲು ಹೋದಾಗ ಪ್ರತಿರೋಧ ತೋರಿದ ಬಾಲಕನ ಮೇಲೆ ಪೊಲೀಸರು ಗುಂಡು ಹಾರಿಸಿರು ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪಾಪಕುಡಿಯಲ್ಲಿ ನಡೆದಿದೆ.

ಪಾಪಕುಡಿಯ ಪ್ರದೇಶವೊಂದರಲ್ಲಿ ಆರೋಪಿತ ಬಾಲಕ ಗುಂಪು ಘರ್ಷಣೆಯಲ್ಲಿ ಭಾಗಿಯಾಗಿದ್ದ. ಸ್ಥಳಕ್ಕೆ ತೆರಳಿದ್ದ ಪೊಲೀಸರು ಗುಂಪು ಘರ್ಷಣೆ ನಿಯಂತ್ರಿಸಿ ಆರೋಪಿತ 17 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲು ಯತ್ನಿಸಿದ್ದರು.

ADVERTISEMENT

ಈ ವೇಳೆ ಪಿಎಸ್‌ಐ ಮೇಲೆ ಚಾಕುವಿನಿಂದ ಬಾಲಕ ದಾಳಿ ನಡೆಸಿದ್ದಾನೆ. ಆಗ ಪೊಲೀಸರು ಬಾಲಕನ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಪಿಎಸ್‌ಐ ಗಾಯಗೊಂಡಿದ್ದಾರೆ. ಇಬ್ಬರನ್ನೂ ತಿರುನಲ್ವೇಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.