ADVERTISEMENT

ಧೋನಿ ಮಗಳಿಗೆ ಅತ್ಯಾಚಾರದ ಬೆದರಿಕೆ: 16 ವರ್ಷದ ಬಾಲಕನ ಬಂಧನ

ಏಜೆನ್ಸೀಸ್
Published 12 ಅಕ್ಟೋಬರ್ 2020, 4:28 IST
Last Updated 12 ಅಕ್ಟೋಬರ್ 2020, 4:28 IST
ಮಹೇಂದ್ರ ಸಿಂಗ್ ಧೋನಿ
ಮಹೇಂದ್ರ ಸಿಂಗ್ ಧೋನಿ   

ಅಹಮದಾಬಾದ್‌: ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ಐದು ವರ್ಷದ ಮಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಾಚಾರದ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ ಪೊಲೀಸರು 16 ವರ್ಷದ ಬಾಲಕನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಮೂಲಕ ಧೋನಿ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ. ಈ ಸಂಬಂಧ ಧೋನಿ ಪತ್ನಿ ಸಾಕ್ಷಿ ಸಿಂಗ್‌ರಾಂಚಿ ಪೊಲೀಸರಿಗೆ ದೂರು ನೀಡಿದ್ದರು. ಬೆದರಿಕೆ ಹಾಕಿರುವ ಬಾಲಕ 12ನೇ ತರಗತಿಯಲ್ಲಿ ಓದುತ್ತಿದ್ದು ಕಛ್‌ ಸಮೀಪದ ಮುಂದ್ರಾ ಗ್ರಾಮದ ನಿವಾಸಿ ಎಂದು ಪೊಲೀಸರುಹೇಳಿದ್ದಾರೆ.

ರಾಂಚಿ ಪೊಲೀಸರು ಪ್ರಕರಣ ಸಂಬಂಧ ತನಿಖೆ ನಡೆಸಿ ಆರೋಪಿಯ ಬಗ್ಗೆ ಗುಜರಾತ್‌ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಛ್‌ ಪೊಲೀಸರು ಆರೋಪಿಯನ್ನು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ADVERTISEMENT

ಬಂಧಿತ ಬಾಲಕ ಬೆದರಿಕೆ ಹಾಕಿರುವ ಬಗ್ಗೆತಪ್ಪು ಒಪ್ಪಿಕೊಂಡಿದ್ದು ಅವನನ್ನುರಾಂಚಿ ಪೊಲೀಸರ ವಶಕ್ಕೆ ಒಪ್ಪಿಸಲಾಗುವುದು ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಮೊದಲು ಆಟಗಾರರ ಪತ್ನಿಯರು ಅಥವಾ ಗೆಳತಿಯರಿಗೆ ಟ್ರೋಲ್‌ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗುತ್ತಿತ್ತು. ಆದರೆ, ಈಗ ಧೋನಿಯವರ ಐದು ವರ್ಷದ ಮಗಳಿಗೆ ಬೆದರಿಕೆ ಹಾಕಿದ್ದು ಮೃಗೀಯ ವರ್ತನೆಗಿಂತಲೂ ಕೀಳಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.