ADVERTISEMENT

11ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ವಿಡಿಯೊ ಮಾಡಿದ್ದವರು ಸೆರೆ

ಪಿಟಿಐ
Published 10 ಜನವರಿ 2022, 2:37 IST
Last Updated 10 ಜನವರಿ 2022, 2:37 IST
   

ಜಿಂದ್ (ಹರಿಯಾಣ): 16 ವರ್ಷದ ಬಾಲಕಿ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದು, ತಮ್ಮ ಹೀನ ಕೃತ್ಯವನ್ನು ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.

ಕಳೆದ ವರ್ಷ ಆಗಸ್ಟ್ 5ರಂದು ಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ 11ನೇ ತರಗತಿಯ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಪರಿಚಿತ ಮಹಿಳೆಯನ್ನು ಭೇಟಿಯಾಗಲು ಬಂದಿದ್ದಾಗ ಅತ್ಯಾಚಾರ ಎಸಗಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಆರೋಪಿಗಳು ಆಕೆಗೆ ಆಹಾರದಲ್ಲಿ ಮತ್ತು ಬರುವ ಔಷಧ ತಿನ್ನಿಸಿ ಈ ಕುಕೃತ್ಯ ಎಸಗಿದ್ದಾರೆ. ಅತ್ಯಾಚಾರದ ವಿಡಿಯೊವನ್ನು ಸಹ ಚಿತ್ರೀಕರಿಸಿದ್ದ ಆರೋಪಿಗಳು ಹಣಕ್ಕಾಗಿ ಪೀಡಿಸುತ್ತಿದ್ದರು ಎಂದು ಶನಿವಾರ ಸಂತ್ರಸ್ತೆಯ ತಾಯಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

ಘಟನೆ ಕುರಿತಂತೆ ಯಾರಿಗೂ ಹೇಳದಂತೆ ಬೆದರಿಸಿ ಹಲವು ಬಾರಿ ಹಣ ವಸೂಲಿ ಮಾಡಿದ್ದಾರೆ.

ಆರೋಪಿಗಳ ಸುಲಿಗೆಯಿಂದ ಬೇಸತ್ತ ಬಾಲಕಿ ಕೊನೆಗೆ ತನ್ನ ಸಂಕಟವನ್ನು ಕುಟುಂಬದವರಿಗೆ ವಿವರಿಸಿದ್ದಾರೆ. ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.