ಪಟ್ನಾ: ಬಿಹಾರದ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರ ಪುತ್ರ, ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ ತೇಜ್ ಪ್ರತಾಪ್ ಯಾದವ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಸದ್ಯ ತೇಜ್ ಪ್ರತಾಪ್ ಹಸನ್‌ಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಹುವಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಸುದ್ದಿ ಕೇಳಿ ನನ್ನ ವಿರುದ್ಧ ಸ್ಪರ್ಧಿಸುವವರಿಗೆ ಈಗಾಗಲೇ ಚಳಿ–ಜ್ವರ ಬಂದಿರಬಹುದು ಎಂದರು. ನನಗೆ ಜನ ಬೆಂಬಲ ಇದೆ, ನನ್ನ ಅಭಿಮಾನಿಗಳು, ಬೆಂಬಲಿಗರು, ಹಿತೈಷಿಗಳು ನನ್ನನ್ನು 'ಟೀಮ್ ತೇಜ್ ಪ್ರತಾಪ್ ಯಾದವ್' ಎಂಬ ಸಾಮಾಜಿಕ ಮಾಧ್ಯಮದ ಖಾತೆ ಮೂಲಕ ಪಾಲೋಮಾಡುತ್ತಿದ್ದಾರೆ ಎಂದು ಹೇಳಿದರು.
ಈ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸ್ಥಾನ ಉಳಿಸಿಕೊಳ್ಳಲಾರರು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.