ಪಿಟಿಐ
ಪಟ್ನಾ: ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಆದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಬಿಜೆಪಿಯ ಹಿರಿಯ ನಾಯಕರೂ ಆದ ಬಿಹಾರದ ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಬಿಹಾರದ ಹಲವು ಹಿರಿಯ ನಾಯಕರು ಬುಧವಾರ ನಾಮಪತ್ರ ಸಲ್ಲಿಸಿದರು.
ತೇಜಸ್ವಿ ಅವರು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಚಿಂತಿಸಿದ್ದಾರೆ ಎಂಬ ವದಂತಿ ಹಬ್ಬಿತ್ತು. ಅದನ್ನು ಅಲ್ಲಗಳೆದ ಅವರು, ‘ರಾಘೋಪುರ ಕ್ಷೇತ್ರದ ಜನ ಎರಡು ಬಾರಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಮೂರನೇ ಬಾರಿಯೂ ಅವಕಾಶ ನೀಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಪ್ರತಿಕ್ರಿಯಿಸಿದರು.
ಲಖಿಸರಾಯ್ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿ ಆಯ್ಕೆ ಬಯಸಿ ಬಿಜೆಪಿಯ ಸಿನ್ಹಾ ಅವರು ನಾಮಪತ್ರ ಸಲ್ಲಿಸಿದರು. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಸಾಥ್ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.