ADVERTISEMENT

ಲಾಲುಗೆ ಜೈಲು: ನಾವು ಹೆದರಲ್ಲ ಎಂದ ತೇಜಸ್ವಿ ಯಾದವ್, ಬಿಜೆಪಿ ವಿರುದ್ಧ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಫೆಬ್ರುವರಿ 2022, 10:39 IST
Last Updated 21 ಫೆಬ್ರುವರಿ 2022, 10:39 IST
ತೇಜಸ್ವಿ ಯಾದವ್ - ಪಿಟಿಐ ಸಂಗ್ರಹ ಚಿತ್ರ
ತೇಜಸ್ವಿ ಯಾದವ್ - ಪಿಟಿಐ ಸಂಗ್ರಹ ಚಿತ್ರ   

ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರಿಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಅವರ ಮಗ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೇವು ಹಗರಣಕ್ಕೆ ಸಂಬಂಧಿಸಿದ ಡೊರಂಡ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್‌ ಯಾದವ್‌ಗೆ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ, ₹60 ಲಕ್ಷ ದಂಡ ವಿಧಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ತೇಜಸ್ವಿ ಯಾದವ್, ‘ಒಂದು ವೇಳೆ ಲಾಲು ಅವರು ಬಿಜೆಪಿ ಜತೆ ಕೈಜೋಡಿಸಿದ್ದರೆ ಅವರನ್ನು ರಾಜ ಹರಿಶ್ಚಂದ್ರ ಎಂದು ಕರೆಯಲಾಗುತ್ತಿತ್ತು. ಆದರೆ ಅವರು ಆರ್‌ಎಸ್‌ಎಸ್–ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಜೈಲು ಶಿಕ್ಷೆಯಾಗಿದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ’ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.