ADVERTISEMENT

ದೇಶವು ಹಣದುಬ್ಬರದಿಂದ ನಲುಗುತ್ತಿದೆ: ಕೇಂದ್ರದ ವಿರುದ್ಧ ತೇಜಸ್ವಿ ಯಾದವ್‌ ಆಕ್ರೋಶ

ಏಜೆನ್ಸೀಸ್
Published 26 ಅಕ್ಟೋಬರ್ 2020, 5:59 IST
Last Updated 26 ಅಕ್ಟೋಬರ್ 2020, 5:59 IST
ತೇಜಸ್ವಿ ಯಾದವ್‌
ತೇಜಸ್ವಿ ಯಾದವ್‌   

ಪಟ್ನಾ: ದೇಶವು ಹಣದುಬ್ಬರದಿಂದ ನಲುಗುತ್ತಿದ್ದು, ನಾವು ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದೇವೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ತಿಳಿಸಿದ್ದಾರೆ

ಈ ವಿಚಾರವಾಗಿ ಸೋಮವಾರ ಮಾತನಾಡಿರುವ ಅವರು, 'ಹಣದುಬ್ಬರವು ದೊಡ್ಡ ಸಮಸ್ಯೆಯಾಗಿದೆ. ದೇಶದಲ್ಲಿ ನಿರುದ್ಯೋಗ, ಹಸಿವು ಮತ್ತು ಬಡತನ ವ್ಯಾಪಕವಾಗುತ್ತಿದೆ. ಸಣ್ಣ ವ್ಯಾಪಾರಿಗಳು ನಾಶವಾಗಿದ್ದಾರೆ. ಜಿಡಿಪಿ ಕುಸಿಯುತ್ತಿದೆ. ನಾವು ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದೇವೆ' ಎಂದು ಅವರು ಹೇಳಿದ್ದಾರೆ.

'ಈ ಹಿಂದೆ ಈರುಳ್ಳಿ ಬೆಲೆಯು ಕೆ.ಜಿ.ಗೆ ₹50-60 ತಲುಪಿದ ಸಂದರ್ಭದಲ್ಲಿ ಬಿಜೆಪಿಯವರು ಮಾತನಾಡುತ್ತಿದ್ದರು. ಈಗ ಕೆ.ಜಿ.ಗೆ ₹80 ದಾಟಿದರೂ ಅವರು ಮೌನವಾಗಿದ್ದಾರೆ. ರೈತರು ನಾಶವಾಗುತ್ತಿದ್ದಾರೆ. ಯುವಕರು ನಿರುದ್ಯೋಗಿಗಳಾಗಿದ್ದಾರೆ. ಶಿಕ್ಷಣ, ಉದ್ಯೋಗ ಮತ್ತು ವೈದ್ಯಕೀಯ ಸಹಾಯಕ್ಕಾಗಿ ಜನರು ವಲಸೆ ಹೋಗುತ್ತಿದ್ದಾರೆ' ಎಂದು ಕೇಂದ್ರ ಹಾಗೂ ಬಿಹಾರ ಸರ್ಕಾರಗಳ ವಿರುದ್ಧ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.