ADVERTISEMENT

ನಿರುದ್ಯೋಗ ಬಿಟ್ಟರೆ ಬಿಹಾರಕ್ಕೆ ಎನ್‌ಡಿಎ ಕೊಡುಗೆಯೇನು: ತೇಜಸ್ವಿ ಯಾದವ್ ಪ್ರಶ್ನೆ

ಏಜೆನ್ಸೀಸ್
Published 23 ಅಕ್ಟೋಬರ್ 2020, 4:48 IST
Last Updated 23 ಅಕ್ಟೋಬರ್ 2020, 4:48 IST
ತೇಜಸ್ವಿ ಯಾದವ್
ತೇಜಸ್ವಿ ಯಾದವ್   

ಪಟ್ನಾ: ನಿರುದ್ಯೋಗ ಸಮಸ್ಯೆ ಬಿಟ್ಟರೆ ಬಿಹಾರಕ್ಕೆ ಎನ್‌ಡಿಎ ಸರ್ಕಾರದ ಕೊಡುಗೆಗಳೇನು ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಲಿದ್ದಾರೆ ಎಂಬುದಾಗಿ ಭಾವಿಸಿದ್ದೇನೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಮೋದಿಯವರು ಮೂರು ಚುನಾವಣಾ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಯಾದವ್, ನಿರುದ್ಯೋಗ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

15 ವರ್ಷಗಳ ಕಾಲ ಬಿಜೆಪಿ–ಜೆಡಿಯು ಸರ್ಕಾರ ಆಡಳಿತ ನಡೆಸಿದ್ದರೂ ರಾಜ್ಯವು ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಟಿ, ಕೃಷಿ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಲು ಕಾರಣವೇನು ಎಂಬುದನ್ನು ಬಿಹಾರದ ನಿವಾಸಿಗಳಿಗೆ ಮೋದಿಯವರು ಇಂದಿನ ಭಾಷಣದಲ್ಲಿ ತಿಳಿಸುತ್ತಾರೆ ಎಂಬುದಾಗಿ ಭಾವಿಸಿದ್ದೇನೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಯು ಅಕ್ಟೋಬರ್ 28, ನವೆಂಬರ್ 3 ಹಾಗೂ 7ರಂದು ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.