ಪಟ್ನಾ: ಎರಡು ಮತದಾರರ ಗುರುತಿನ ಚೀಟಿ (ಎಪಿಕ್) ಹೊಂದಿರುವುದಕ್ಕಾಗಿ ಆರ್‌ಜೆಡಿ ನಾಯಕ ಹಾಗೂ ಬಿಹಾರ ವಿಧಾನಸಭಾ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರಿಗೆ ಚುನಾವಣಾ ಆಯೋಗ ಭಾನುವಾರ ನೋಟಿಸ್ ನೀಡಿದೆ.
‘ಎರಡು ಎಪಿಕ್ ಹೊಂದುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಇದು ಅಪರಾಧ’ ಎಂದು ಬಿಜೆಪಿ ಖಂಡಿಸಿತ್ತು. ಇದರ ಬೆನ್ನಲ್ಲೇ, ಆಯೋಗವು ನೋಟಿಸ್ ಜಾರಿ ಮಾಡಿದೆ. ತೇಜಸ್ವಿ ಅವರು ದಿಘಾ ವಿಧಾನಸಭಾ ಕ್ಷೇತ್ರದಲ್ಲಿ ಮತ ಚಲಾಯಿಸುತ್ತಾರೆ.
‘ಆಗಸ್ಟ್ 2ರಂದು ಸುದ್ದಿಗೋಷ್ಠಿ ನಡೆಸಿದ್ದ ನೀವು, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲ ಎಂದು ಹೇಳಿದ್ದಿರಿ. ಎಪಿಕ್ ಸಂಖ್ಯೆಯನ್ನೂ (ಆರ್‌ಎಬಿ2916120) ಉಲ್ಲೇಖಿಸಿದ್ದಿರಿ. ತನಿಖೆ ನಂತರ, ಈ ಸಂಖ್ಯೆಯ ಎಪಿಕ್ ಅನ್ನು ಆಯೋಗ ನೀಡಿಯೇ ಇಲ್ಲ ಎಂಬುದು ತಿಳಿದುಬಂದಿತು’ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.