ADVERTISEMENT

ತೆಲಂಗಾಣ: ನಟ ಚಿರಂಜೀವಿಗೆ ಕೊರೊನಾ ಸೋಂಕು ಇಲ್ಲ

ಪಿಟಿಐ
Published 13 ನವೆಂಬರ್ 2020, 6:31 IST
Last Updated 13 ನವೆಂಬರ್ 2020, 6:31 IST
ಮಾದರಿ ಸಂಗ್ರಹಿಸುತ್ತಿರುವ ಆರೋಗ್ಯ ಸಿಬ್ಬಂದಿ   –ಎಫ್‌ಪಿ ಚಿತ್ರ
ಮಾದರಿ ಸಂಗ್ರಹಿಸುತ್ತಿರುವ ಆರೋಗ್ಯ ಸಿಬ್ಬಂದಿ   –ಎಫ್‌ಪಿ ಚಿತ್ರ   

ಹೈದರಾಬಾದ್: ತೆಲಂಗಾಣದಲ್ಲಿ 997 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2.56 ಲಕ್ಷಕ್ಕೆ ಏರಿಕೆಯಾಗಿದೆ. ಅಲ್ಲದೆ ಕೋವಿಡ್‌ನಿಂದಾಗಿ ಹೊಸದಾಗಿ ಮೂರು ಮಂದಿ ಮೃತಪಟ್ಟಿದ್ದು, ಈವರೆಗೆ ಸೋಂಕಿನಿಂದ 1,397 ಮಂದಿ ಮೃತಪಟ್ಟಿದ್ದಾರೆ ಎಂದು ತೆಲಂಗಾಣ ಸರ್ಕಾರ ಶುಕ್ರವಾರ ತಿಳಿಸಿದೆ.

ತೆಲುಗು ಚಿತ್ರನಟ, ಕೇಂದ್ರದಮಾಜಿಸಚಿವ ಕೆ. ಚಿರಂಜೀವಿ ಅವರಲ್ಲಿ ಸೋಂಕು ದೃಢಪಟ್ಟಿದೆ ಎನ್ನಲಾಗಿತ್ತು.ಆದರೆ ಈ ಬಗ್ಗೆ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿರುವ ಚಿರಂಜೀವಿ ಅವರು, ಮೂರು ಪರೀಕ್ಷೆಗಳನ್ನು ನಡೆಸಿದ ಬಳಿಕ ವೈದ್ಯರು ತಮಗೆ ಕೊರೊನಾ ಸೋಂಕು ತಗುಲಿಯೇ ಇಲ್ಲ ಎಂದು ದೃಢಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಗ್ರೇಟರ್‌ ಹೈದರಾಬಾದ್‌ ಮಹಾನಗರ ಪಾಲಿಕೆ(ಜಿಎಚ್‌ಎಂಸಿ) ವ್ಯಾಪ್ತಿಯಲ್ಲಿ 169 ಪ್ರಕರಣಗಳು ಸೇರಿದಂತೆ ಮೆಡ್ಚಲ್ ಮಲ್ಕಾಜ್‌ಗಿರಿಯಲ್ಲಿ 85, ರಂಗಾರೆಡ್ಡಿ ಜಿಲ್ಲೆಯಲ್ಲಿ 66 ಹೊಸ ಪ್ರಕರಣಗಳು ವರದಿಯಾಗಿದೆ ಎಂದು ಜಿಎಚ್‌ಎಂಸಿ ಗುರುವಾರದ ಬುಲೆಟಿನ್‌ನಲ್ಲಿ ಹೇಳಿದೆ.

ADVERTISEMENT

ನ.11 ರಂದು 17,094 ಸೋಂಕಿತರು ಚಿಕಿತ್ಸೆಗೆ ಒಳಗಾಗಿದ್ದು, 42,163 ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ. ಈವರೆಗೆ ಒಟ್ಟು 48.12 ಲಕ್ಷ ಮಂದಿಯ ಮಾದರಿಯನ್ನು ಪರೀಕ್ಷಿಸಲಾಗಿದೆ.

ತೆಲಂಗಾಣದಲ್ಲಿ ಸಾವಿನ ಪ್ರಮಾಣವು ಶೇಕಡಾ 0.54 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ. 92.76 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.