ADVERTISEMENT

ತೆಲಂಗಾಣ| ಸಿಐಡಿ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ದಾಖಲು

ಐಎಎನ್ಎಸ್
Published 30 ಜುಲೈ 2023, 10:58 IST
Last Updated 30 ಜುಲೈ 2023, 10:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಹೈದರಾಬಾದ್‌: ತೆಲಂಗಾಣದ ವಿದ್ಯುತ್‌ ಸರಬರಾಜು ಕಂಪನಿಯ ಮಹಿಳಾ ಉದ್ಯೋಗಿ ಒಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಅಪರಾಧ ತನಿಖಾ ವಿಭಾಗದ ಅಧಿಕಾರಿ(ಸಿಐಡಿ) ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಹೈದರಾಬಾದ್‌ನ ಚೈತನ್ಯಪುರಿ ಪೊಲೀಸ್‌ ಠಾಣೆಯಲ್ಲಿ ಅಪರಾಧ ತನಿಖಾ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ದೂರು ದಾಖಲಿಸಲಾಗಿದೆ.

ಕೋತಪೇಟ್‌ನ ಟಿಎಸ್‌ಎಸ್‌ಪಿಡಿಸಿಎಲ್‌ನಲ್ಲಿ ಕೆಲಸ ಮಾಡುತ್ತಿರುವ ಮಹಿಳೆ, ಎರಡು ವರ್ಷಗಳ ಹಿಂದೆ ಸರೂರ್‌ ನಗರ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕಾರ್ಯಕ್ರಮವೊಂದರಲ್ಲಿ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಭೇಟಿಯಾದ ಬಳಿಕ, ಕಿರುಕುಳ ನೀಡಲು ಪ್ರಾರಂಭಿಸಿರುವುದಾಗಿ ಆರೋಪಿಸಿದ್ದಾರೆ.

ADVERTISEMENT

ಸಂತ್ರಸ್ತೆಯ ಪ್ರಕಾರ, ಪೊಲೀಸ್‌ ವರಿಷ್ಠಾಧಿಕಾರಿ, ಅಶ್ಲೀಲ ಸಂದೇಶಗಳು, ಫೋಟೋಗಳು, ವಿಡಿಯೊಗಳನ್ನು ವಾಟ್ಸಾಪ್‌ನಲ್ಲಿ ಕಳುಹಿಸುತ್ತಿದ್ದರು. ಸೀರೆಯಲ್ಲಿರುವ ಫೊಟೋವನ್ನು ಕಳುಹಿಸುವಂತೆ ಕೇಳಿದ್ದರು. ಪ್ರಕರಣವೊಂದರ ಕುರಿತು ಚರ್ಚಿಸಲು ಖುದ್ದಾಗಿ ತನ್ನನ್ನು ಭೇಟಿಯಾಗುವಂತೆಯೂ ಹೇಳಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಪೊಲೀಸ್‌ ಅಧಿಕಾರಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ ಎ(ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.