ADVERTISEMENT

ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ಗೆ ಭಾರತ ರತ್ನ: ನಿರ್ಣಯ ಶೀಘ್ರ

ಮುಂಬರುವ ಅಧಿವೇಶನದಲ್ಲಿ ನಿರ್ಣಯ ಅಂಗೀಕಾರ: ಸಿ.ಎಂ ಚಂದ್ರಶೇಖರರಾವ್‌

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 19:00 IST
Last Updated 28 ಆಗಸ್ಟ್ 2020, 19:00 IST
ಕೆ.ಚಂದ್ರಶೇಖರ್ ರಾವ್‌
ಕೆ.ಚಂದ್ರಶೇಖರ್ ರಾವ್‌   

ಹೈದರಾಬಾದ್‌:ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ ಅವರಿಗೆ ಭಾರತರತ್ನ ಪ್ರದಾನ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರುವ ಸಂಬಂಧ ಮುಂದಿನ ತಿಂಗಳು ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯವನ್ನು ಅಂಗೀಕರಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್‌ ಶುಕ್ರವಾರ ಹೇಳಿದ್ದಾರೆ.

ನರಸಿಂಹರಾವ್‌ ಅವರ ಜನ್ಮಶತಮಾನೋತ್ಸವ ಆಚರಣೆ ಕುರಿತು ಸಂಪುಟ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಈ ವಿಷಯ ತಿಳಿಸಿದರು.

‘ಸಂಸತ್‌ ಭವನದಲ್ಲಿ ರಾವ್‌ ಅವರ ಭಾವಚಿತ್ರವನ್ನು ಅಳವಡಿಸಬೇಕು. ಹೈದರಾಬಾದ್‌ನಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಅವರ ಹೆಸರಿಡುವಂತೆಯೂ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.